ಇಂದು ರಾಜಧಾನಿ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಭೇಟಿ ಮಾಡಿದ ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷರಾದ ಕಲಿಕೆ ಮಾರಪ್ಪ ಅವರು ಸಚಿವರ ಆಶೀರ್ವಾದ ಪಡೆದರು ಇತ್ತೀಚಿಗೆ ನಿಧನರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಶಾಮನೂರು ನೇರ ನಡೆ ನುಡಿಯ ರಾಜಕಾರಣಿಯಾಗಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮಕ್ಕಳ ಉನ್ನತ ಭವಿಷ್ಯಕ್ಕೆ ನಾಂದಿ ಹಾಡಿದವರು..
ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರು ಇಂದಿನ ರಾಜಕಾರಣಿಗಳಿಗೆ ಆದರ್ಶಪ್ರಾಯರಾಗಿದ್ದರು ಎಂದರು.
